ಕಾಸರಗೋಡು: ನಿನ್ನೆ ಮತ್ತೆ ನಾಲ್ವರಲ್ಲಿ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ನಿನ್ನೆ 4 ಮಂದಿಯಲ್ಲಿ ಕೋವಿಡ್ ಸೋಂಕು ಖಚಿತಗೊಂಡಿದೆ. ಒಬ್ಬರು ರೋಗದಿಂದ ಗುಣಮುಖರಾಗಿದ್ದಾರೆ. ಮಹಾರಾಷ್ಟ್ರ ದಿಂದ ಆಗಮಿಸಿದ್ದ ಪೈವಳಿಕೆ ನಿವಾಸಿ 42 ವರ್ಷದ ವ್ಯಕ್ತಿ, ಬದಿಯಡ್ಕ ನಿವಾಸಿ 63 ವರ್ಷದ ವ್ಯಕ್ತಿ, ಮಂಗಲ್ಪಾಡಿ ನಿವಾಸಿ 31 ವರ್ಷದ ವ್ಯಕ್ತಿ, ದುಬಾಯಿಯಿಂದ ಆಗಮಿಸಿದ 58 ವರ್ಷದ ಉದುಮಾ ನಿವಾಸಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಪೈವಳಿಕೆ ನಿವಾಸಿ 28 ವರ್ಷದ ವ್ಯಕ್ತಿ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇವರು ಉಕ್ಕಿನಡ್ಕ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದರು. ಜಿಲ್ಲೆಯಲ್ಲಿ ಒಟ್ಟು 3665 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 3081 ಮಂದಿ, ಆಸ್ಪತ್ರೆಗಳಲ್ಲಿ 584 ಮಂದಿ ನಿಗಾದಲ್ಲಿದ್ದಾರೆ. 238 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ಶುಕ್ರವಾರ 485 ಮಂದಿ ನೂತನವಾಗಿ ಐಸೊಲೇಷನ್ ವಾರ್ಡಿಗೆ ದಾಖಲಿಸಲಾಗಿದೆ.