ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

ಕಟೀಲು: ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಿನ್ನಿಗೋಳಿಯ ಪೆಟ್ರೋಲ್ ಪಂಪ್ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಕಟೀಲು ಸಮೀಪದ ಎಕ್ಕಾರು ಕೆಂಚಗುಡ್ಡೆ ನಿವಾಸಿ ರಾಮಚಂದ್ರ (65)ಎಂದು ಗುರುತಿಸಲಾಗಿದೆ.ವ್ಯಕ್ತಿಯು ನಿನ್ನೆ ರಾತ್ರಿ ರಸ್ತೆಯ ಸಮೀಪ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ . ಮುಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ,ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.