ಕಾಸರಗೋಡು: ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಹಿಂಸಾಚಾರ, ಹಲವರಿಗೆ ಗಾಯ

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸದಿರುವುದನ್ನು ಖಂಡಿಸಿ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕ್ರೈಂ ಬ್ರಾಂಚ್ ಕಚೇರಿಗೆ ಮುತ್ತಿಗೆ ಹಾಜಕಲೆತ್ನಿಸಿದ ವೇಳೆ ಹಿಂಸಾಚಾರ ನಡೆದಿದ್ದು ಓರ್ವ ಡಿವೈಎಸ್‍ಪಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ವಿದ್ಯಾನಗರದಿಂದ ಮೆರವಣಿಗೆ ಮೂಲಕ ತೆರಳಿದ್ದು ಈ ವೇಳೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ತಡೆದಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿದದ್ದು ಹಲವಾರು ಮಂದಿ ಕಾರ್ಯಕರ್ತರು ಗಾಯಗೊಂಡರು. ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *