ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿದ್ಯಾನಗರ ಚಾಲಕುನ್ನುನಿವಾಸಿ ಮುಹಮ್ಮದ್ ಸಿನ್ಸಾದ್(20) ಎಂದು ಗುರುತಿಸಲಾಗಿದೆ. ಹದಿನಾಲ್ಕರ ಹರೆಯದ ಬಾಲಕಿ ನೀಡಿದ ದೂರಿನಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗೆ ಬಾಲಕಿ ಪರಿಚಿತಳಾಗಿದ್ದು ಆಕೆಯ ಜೊತೆ ಸಲುಗೆ ಬೆಳೆಸಿ ಫೆಬ್ರವರಿ ತಿಂಗಳಿಂದ ನಿರಂತರ ಲೈಂಗಿಕ ದೌರ್ಜನ್ಯ ನೀಡಿದ್ದಾಗಿ ದೂರಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *