ತೊಕ್ಕೊಟ್ಟು: ಭೀಕರ ಅಪಘಾತ: ನವದಂಪತಿ ಸಾವು

ಮಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಇಂದು ಅಂಜೆ ಸಂಭವಿಸಿದೆ.

ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (35) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳಯವ ಸಂದರ್ಭ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ದಂಪತಿ ಇದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ಕೆಲ ಮೀ. ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ.

ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಅವೈಜ್ಞಾನಿಕ ತಿರುವು ಸಾರ್ವಜನಿಕರ ಆಕ್ರೋಶ:
ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿತ್ಯ ಅಪಘಾತಗಳು ನಡೆಯುತ್ತಲೇ ಇದೆ. ಫ್ಲೈಓವರ್ ಕೊನೆಗಳ್ಳುವ ತೊಕ್ಕೊಟ್ಟು ಓವಬ್ರಿಡ್ಜ್ ಸ್ಥಳದಲ್ಲಿಯೇ ಉಳ್ಳಾಲಕ್ಕೆ ಹೋಗುವ ದಾರಿ ಇರುವುದರಿಂದ ಅಪಘಾತವನ್ನು ಆಹ್ವಾನಿಸುತ್ತಲೇ ಇದೆ. ವಾರದ ಹಿಂದೆ ಬಸ್ ಮತ್ತು ಲಾರಿ ನಡುವೆ ಅಪಘಾತ ನಡೆದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೆ ವಾರ ಕಳೆಯುವುದರ ಒಳಗೆ ನವದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಆಕ್ರೋಶಿತರು ಜಮಾಯಿಸಿದ್ದು, ಸಂಚಾರಿ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಓವರ್ ಬ್ರಿಡ್ಜ್ ಕೊನೆಗೊಳ್ಳುವ ಮೂಲೆಯಲ್ಲಿ ನಿಂತು ದಂಡ ವಿಧಿಅಉವ ಪೊಲೀಸರು, ಫ್ಲೈಓವರ್ ನಲ್ಲಿ ನಿಂತು ವಾಹನಗಳ ವೇಗವನ್ನು ತಡೆಯುವಲ್ಲಿ ಪ್ರಯತ್ನಿಸುತ್ತಿಲ್ಲ ಅನ್ನುವ ಆರೋಪ ಸಾರ್ವಜನಿಕರು ಮಾಡಿದ್ದಾರೆ.

Leave a Reply

Your email address will not be published. Required fields are marked *