ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ: ಸಂಬಂಧಿಯಿಂದಲೇ ಕೊಲೆ!

ಉಳ್ಳಾಲ:ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇರಾ ಗ್ರಾಮದ ಗುಡ್ಡವೊಂದರಲ್ಲಿ ಹೂತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಂಬಂಧಿಯೇ ಕೊಲೆ ಮಾಡಿದ ಬಗ್ಗೆ ಮಾಹಿತಿ ಲಭಿಸಿದೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಎಂಬವವರು. ಗುರುವಾರ ಸಂಜೆಯಿಂದ ಕಾಣೆಯಾಗಿದ್ದು ಶುಕ್ರವಾರ ಮಧ್ಯಾಹ್ನದವರೆಗೂ ಇವರ ಮೊಬೈಲ್ ರಿಂಗ್ ಆಗುತ್ತಿತ್ತು. ಬಳಿಕ ಸ್ವಿಚ್ಡ್ ಆಫ್ ಆಗಿದೆ .ಇದರಿಂದ ಸಂಶಯಗೊಂಡ ಪಲ್ಲಿಯಬ್ಬ ಅವರ ಸಂಬಂಧಿಕರು ಹುಡುಕಾಟ ನಡೆಸಿದ್ದು ಮೃತದೇಹ ಮೂಳೂರು ಇರಾ ಸಮೀಪ ಗುಡ್ಡವೊಂದರಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ .ಈ ಕೃತ್ಯದಲ್ಲಿ ಸಂಬಂಧಿಯೇ ಸೂತ್ರದಾರನಾಗಿದ್ದು ಹಣಕಾಸಿನ ವ್ಯವಹಾರವೇ . ಕೊಲೆಗೆ ಕಾರಣ ಎಂದು ತಿಳಿದುಬಂದಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು ಮತ್ತೆ ಇಬ್ಬರ ಬಂಧನಕ್ಕೆ ಕೊಣಾಜೆ ಪೊಲೀಸರು ಬಲೇ ಬೀಸಿದ್ದಾರೆ.