ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತ್ಯು

ಕಾಪು : ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರನೋರ್ವ, ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಬಿ. ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಶವವನ್ನು ಆಂಬ್ಯುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.