ಯುವಕ ಆತ್ಮಹತ್ಯೆ, ಪ್ರೇಮ ವೈಫಲ್ಯ ಶಂಕೆ?

ಕೊಣಾಜೆ: ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ‌ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ , ಮೃತ ಯುವಕನನ್ನು ನೆತ್ತಿಲಪದವು ನಿವಾಸಿ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ.
ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೈದಿದ್ದು ರಕ್ಷಿತ್ ಅದೇ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದ. ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *