ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆ

ಉಳ್ಳಾಲ: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.
ಕೆಲ ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು ಕೆಲ ದಿನಗಳ ಹಿಂದಷ್ಟೇ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳ ಬಂಧನವಾಗಿತ್ತು. ಅದೇ ಸಂದರ್ಭದಲ್ಲಿ ಕಾರಣಿಕ ಕ್ಷೇತ್ರ‌ ಕೊಂಡಾಣ ದೈವಸ್ಥಾನದಲ್ಲಿಯು ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ. ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2 thoughts on “ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆ

Leave a Reply

Your email address will not be published. Required fields are marked *