“ಆತಂಕ ಬೇಡ, ಶಾಲೆಯನ್ನು ಸದ್ಯ ತೆರೆಯಲ್ಲ”

ಬೆಂಗಳೂರು: ಸದ್ಯಕ್ಕೆ ಶಾಲೆಯನ್ನು ತೆರೆಯುವುದಿಲ್ಲ, ಮಕ್ಕಳು ಹಾಗೂ ಪೋಷಕರು ಆತಂಕ ಪಡಬೇಡಿ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದರು.
ಜೂನ್ 10, 11, 12 ರಂದು ಶಾಲೆಗಳಲ್ಲಿ ಪೋಷಕರ ಸಭೆ ನಡೆಯಲಿದೆ. ಪೋಷಕರ ಅಭಿಪ್ರಾಯಗಳು ಕ್ರೋಢಿಕರಣವಾಗಿ ಜೂನ್ 15ಕ್ಕೆ ಸರ್ಕಾರವನ್ನು ತಲುಪಬಹುದು. ನಂತರ ನಿರ್ಧಾರ ಮಾಡಲಾಗುವುದು. ಜುಲೈ ಒಂದರಿಂದ ಶಾಲೆಯನ್ನು ತೆರೆಯುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.