ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಬೆಳ್ತಂಗಡಿ ಸರ್ಕಲ್ ಇನ್ ಸ್ಪೆಕ್ಟರ್ ಹಲ್ಲೆ ಆರೋಪ!

ಮಂಗಳೂರು: ಬೆಳ್ತಂಗಡಿ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತರೊಬ್ಬರ ಮೇಲೆ ಬೆಳ್ತಂಗಡಿ ಠಾಣಾ ಸರ್ಕಲ್ ಇನ್ ಸ್ಪೆಕ್ಟರ್ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದಿನಕರ ಆದೇಲು ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೆಸ್ಸೆಸ್ ಶಾರೀರಿಕ ಪ್ರಮುಖ್ ಆಗಿರುವ ದಿನಕರ ಆದೇಲು ಮೇಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಸರ್ಕಲ್ ಇನ್ ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

yhi