ಉಡುಪಿ 62, ದ.ಕ. ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು!

ಉಡುಪಿ: ಜಿಲ್ಲೆಯಲ್ಲಿಂದು 62 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ತಗಲಿದೆ.
ಉಡುಪಿ ಜಿಲ್ಲೆಯಲ್ಲಿ ನಿನ್ನೆ 150 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಮಹಾರಾಷ್ಟ್ರ ಮೂಲದಿಂದ ಸೋಂಕು ಹರಡಿದ್ದು ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯಲ್ಲಿ ಇಂದು 61 ಮಂದಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 472ಕ್ಕೆ ಏರಿಕೆಯಾಗಿದೆ.