ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಆರೋಪಿ ನಿರಂಜನ ಭಟ್ ಗೆ ಜಾಮೀನು
ಉಡುಪಿ: ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಪ್ರಮುಖ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಗೆ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ಆರೋಪಿ ನಿರಂಜನ್ ಭಟ್ ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾನೆ. ಆತನ ತಂದೆ ಪ್ರಕರಣದ ನಾಲ್ಕನೇ ಆರೋಪಿಯೆಂದು ಗುರುತಿಸಲ್ಪಟ್ಟ ಶ್ರೀನಿವಾಸ್ ಭಟ್(65) ಎರಡು ದಿನಗಳ ಹಿಂದೆ ಮೃತಪಟ್ಟಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿದೆ.
ನ್ಯಾಯಾಲಯ ಐದು ಲಕ್ಷ ರೂ. ಬಾಂಡ್ ಪಡೆದು ಏಳು ದಿನಗಳ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ¥ಮೃತ ಶ್ರೀನಿವಾಸ್ ಭಟ್ ಹಾಗೂ ಚಾಲಕ ರಾಘವೇಂದ್ರ ಕೂಡಾ ಪ್ರಕರಣದ ಆರೋಪಿಯಾಗಿದ್ದು ನಿರಂಜನ್ ಭಟ್ ಗೆ ಸಹಕಾರ ನೀಡಿದ್ದ ಆರೋಪ ಎದುರಿಸುತ್ತಿದ್ದರು. ಅವರನ್ನು ಕೋರ್ಟ್ ಬಿಡುಗಡೆ ಮಾಡಿತ್ತು. ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿಯ ಪ್ರಿಯಕರ ನಿರಂಜನ್ ಭಟ್ ಸೇರಿ ಹತ್ಯೆಗೈದಿದ್ದರು.