ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೂ ಕೊರೊನಾ!
ಗದಗ: ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದ ವಿದ್ಯಾರ್ಥಿಗೂ ಕೊರೊನಾ ಸೋಂಕು ಅಂಟಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿ ಹಲವರ ಸಂಪರ್ಕಕ್ಕೆ ಸಿಕ್ಕಿರುವ ಮಾಹಿತಿಯಿದ್ದು ಅವರಿಗೆಲ್ಲ ಸೋಂಕು ಹರಡುವ ಭೀತಿ ವ್ಯಕ್ತವಾಗಿದೆ. ಗದಗದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ನಾಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಯಲ್ಲೂ ಸೋಂಕು ತಗಲಿರುವುದು ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ.