ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮೂವರು ವಿದ್ಯಾರ್ಥಿಗಳು, ಮೇಲ್ವಿಚಾರಕಿಗೆ ಕೊರೊನಾ

ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬಾಗಲಕೋಟೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ಮೂವರು ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕಿಗೆ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯ ನವನಗರದಲ್ಲಿರುವ ಆದರ್ಶ ವಿದ್ಯಾಲಯದ ಬಾಹ್ಯ ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ಹಳ್ಳೂರು ಗ್ರಾಮದ ಪ್ರೌಢಶಾಲೆ ಶಿಕ್ಷಕಿ ಜೂನ್ 25 ಮತ್ತು 26 ರಂದು ನಡೆದ ಪರೀಕ್ಷೆ ವೇಳೆ ಕೊಠಡಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಕ್ಷಕಿಯೇ ಕೊವಿಡ್ ಆಸ್ಪತ್ರೆಗೆ ಭೇಟಿ ನೀಡಿ ಗಂಟಲು ಮಾದರಿ ದ್ರವ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿರುವುದಾಗಿ ವರದಿಯಾಗಿದೆ.

ಮಕ್ಕಳ ಪರೀಕ್ಷೆ ನಡೆಯುತ್ತಿದ್ದು, ಈ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *