ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಲೋಪದೋಷಗಳಿಗೆ ಆಸ್ಪದವಾಗದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಿ: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದವಾಗದಂತೆ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಸುಗಮವಾಗಿ ಪರೀಕ್ಷೆ ನಡೆಸುವಂತೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಹಂತದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಇಲಾಖಾ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದವಾಗದಂತೆ ಶಿಕ್ಷಣ, ಆರೋಗ್ಯ, ಪೊಲೀಸ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಪರೀಕ್ಷಾ ಕೇಂದ್ರಗಳಲ್ಲಿ ನೈರ್ಮಲ್ಯತೆಗೆ ಹೆಚ್ಚು ಒತ್ತು ನೀಡಬೇಕು ಸೋಂಕು ಹರಡುವ ಜಾಗಗಳಲ್ಲಿ ಶೌಚಾಲಯವು ಒಂದಾಗಿದ್ದು ಇದನ್ನು ಶುಚಿಯಾಗಿಟ್ಟುಕೊಳ್ಳಲು ಕ್ರಮವಹಿಸುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಉಮೇಶ್ ಹಾಗೂ ವಿವಿಧ ತಾಲ್ಲೂಕುಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

150 ಕೋಟಿ ಅನುದಾನದಲ್ಲಿ ವಿವಿಧ ಯೋಜನೆಗಳ ಕಾಮಗಾರಿ:
ಜಿಲ್ಲೆಯ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಒಳಗೊಂಡು ಜಿಲ್ಲೆಯ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ರೂ.150 ಕೋಟಿ ಅನುದಾನದಲ್ಲಿ ಹಂತ-ಹಂತವಾಗಿ ಕೆಲಸಗಳು ನಡೆಯುತ್ತಿವೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಹೇಳಿದರು. ಅವರು ಇಂದು ಚಿಕ್ಕಮಗಳೂರು ತಾಲ್ಲೂಕಿನ ಗಾಳಿಹಳ್ಳಿ ಗ್ರಾಮದ ಅಣ್ಣಿಂದಡಿಕೆಯಿಂದ ಭದ್ರಕಾಳಿ ಬನದ ರಸ್ತೆವರೆಗೆ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.

ಪರಿಸರವನ್ನು ಬೆಳೆಸಿ ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರದಾಗಿದ್ದು ಇದಕ್ಕಾಗಿ ಪ್ರತಿಯೊಬ್ಬರು ಮುಂದಾಗಬೇಕು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಹೇಳಿದರು. ಇಂದು ನಗರದ ಹಿರೇಮಗಳೂರಿನ ಪ್ರಭುಲಿಂಗೇಶ್ವರ ಶಾಲಾ ಆವರಣದಲ್ಲಿ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಹಾಗೂ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಸಿರೇ ಉಸಿರು ಎನ್ನುವು ಉದ್ದೇಶದಿಂದ ಪರಿಸರ ದಿನವನ್ನು ಆಚರಣೆ ಮಾಡಲಾಗುತ್ತಿದ್ದು ನಮ್ಮನ್ನು ನಾವು ಉಳಿಸಿಕೊಳ್ಳಲು ಪರಿಸರವನ್ನು ಉಳಿಸುವುದು ಅತ್ಯವಶ್ಯವಾಗಿದ್ದು ಹೆಚ್ಚಾಗಿ ಗಿಡ ಮರಗಳನ್ನು ಬೆಳೆಸುವುದರೊಂದಿಗೆ ಇದರ ಸಂರಕ್ಷಣೆ ಎಲ್ಲರೂ ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಹಿರೇಮಗಳೂರು ಕಣ್ಣನ್, ಮುಖಂಡ ಮಧುಕುಮಾರ್ ಅರಸ್, ರಾಜಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *