ಐಎಂಎ ಜುವೆಲ್ಲರಿ ಪ್ರಕರಣದ ಆರೋಪಿ ಐಎಎಸ್ ಅಧಿಕಾರಿ ವಿಜಯಶಂಕರ್ ನಿಗೂಢ ಆತ್ಮಹತ್ಯೆ

ಬೆಂಗಳೂರು: ಐಎಂಎ ಜ್ಯುವೆಲ್ಲರಿ ಪ್ರಕರಣದ ಆರೋಪಿಯಾಗಿದ್ದ ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ ಇಂದು ಮಾಡಿಕೊಂಡಿದ್ದಾರೆ.
ಇವರು ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.
ಜಯನಗರದ ನಿವಾಸದಲ್ಲಿ ಬೆಡ್‍ರೂಂನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ.
ಅವರು ಐಎಂಎ ಜುವೆಲ್ಲರಿ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಐಎಂಎ ಪ್ರಕರಣದ ರೂವಾರಿ ಮನ್ಸೂರ್ ಅಲಿಖಾನ್‍ನಿಂದ ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದೆ.
ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಇಂದು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇವರ ಆತ್ಮಹತ್ಯೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *