ಕಾಂಗ್ರೆಸ್ ಮುಖಂಡ ಆಸ್ಕರ್ ಆಸ್ಪತ್ರೆಗೆ ದಾಖಲು!

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಯೆನಪೋಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತಮೂಲಗಳು ಹೇಳಿವೆ.
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ನಗರಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆಸ್ಕರ್ ಹಾಗೂ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಲಿದ್ದರು. ಆದರೆ ಡಿಕೆಶಿ ನಗರಕ್ಕೆ ಭೇಟಿ ನೀಡಲಿರುವುದು ಕೊನೆಯ ಕ್ಷಣದಲ್ಲಿ ರದ್ದಾಗಿದೆ.