ಕುಂದಾಪುರ: ಹೋಂ ಕ್ವಾರಂಟೈನ್ ನಲ್ಲಿದ್ದ ಕೋವಿಡ್ ಸೋಂಕಿತ ಸಾವು!
ಉಡುಪಿ: ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ಸಂಜೆ ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ.
54 ವರ್ಷ ಪ್ರಾಯದ ವ್ಯಕ್ತಿ ಕಳೆದ ವಾರ ಯುವಕ ಮಹಾರಾಷ್ಟ್ರದಿಂದ ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಜಿಲ್ಲಾಡಳಿತ ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿತ್ತು. ಅವರಲ್ಲಿ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಮಾರಕ ಕೊರೊನಾಗೆ ಇಬ್ಬರು ಬಲಿಯಾದಂತಾಗಿದೆ. ಈ ಹಿಂದೆ ಮುಂಬೈಯಿಂದ ಬಂದಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು.