ಕೊರೊನಾಕ್ಕೆ ಹೆದರಿ ಆಸ್ಪತ್ರೆಯಲ್ಲೇ ಮಹಿಳೆ ಆತ್ಮಹತ್ಯೆ!

ಬೆಂಗಳೂರು: ಕೊರೊನಾ ವೈರಸ್ ಮಹಾಮಾರಿಗೆ ಹೆದರಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ಶೌಚಾಲಯದಲ್ಲಿ ನಿನ್ನೆ ರಾತ್ರಿ 60 ವರ್ಷದ ಸೋಂಕಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.
ನಸುಕಿನ ಸುಮಾರು 2 ಗಂಟೆಗೆ ಸಮಯಕ್ಕೆ ಶೌಚಾಲಯಕ್ಕೆ ಹೋದ ಮಹಿಳೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಪರೀಕ್ಷಿಸಿದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *