ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮೇಲೆ ಎಸಿಬಿ ದಾಳಿ!

ಬೆಂಗಳೂರು: ನಗರದ ಬಸವನಗುಡಿಯ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮೇಲೆ ಎಸಿಬಿ ದಾಳಿ ನಡೆಸಿದೆ. ಕೆಲವು ದಿನಗಳ ಹಿಂದಷ್ಟೇ ಠೇವಣಿ ಹಣ ವಾಪಸ್ ನೀಡುವಂತೆ ಜನರು ಪ್ರತಿಭಟನೆ ನಡೆಸಿದ್ದರು. ಇಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬ್ಯಾಂಕ್ ಕೇಂದ್ರ ಕಚೇರಿ, ಚಿಕ್ಕಲಸಂದ್ರದಲ್ಲಿರುವ ಕಚೇರಿ, ಬ್ಯಾಂಕ್‍ನ ನಿವೃತ್ತಿ ಸಿಇಓ ಡಾ.ಕೆ.ರಾಮಕೃಷ್ಣ, ಬ್ಯಾಂಕ್ ಅಧ್ಯಕ್ಷರ ಮನೆಯ ಮೇಲೂ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಸಹ ಠೇವಣಿದಾರರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ಚದುರಿಸಿದರು. ಬೆಂಗಳೂರು ನಗರದಲ್ಲಿಯೇ ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್ 12 ಶಾಖೆಗಳನ್ನು ಹೊಂದಿದೆ. ಆಕರ್ಷಕ ಬಡ್ಡಿ ದರ ನೀಡುವ ಘೋಷಣೆಯನ್ನು ಬ್ಯಾಂಕ್ ಮಾಡಿತ್ತು. ಆದ್ದರಿಂದ ಗ್ರಾಹಕರು ಸುಮಾರು 2,400 ಕೋಟಿ ಠೇವಣಿ ಇಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಬ್ಯಾಂಕ್ ಅವ್ಯವಹಾರದ ಕುರಿತು ಕರ್ನಾಟಕ ಹೈಕೋರ್ಟ್‍ನಲ್ಲಿಯೂ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *