ಜು.5ರ ಬಳಿಕ ಮತ್ತೆ `ಲಾಕ್ ಡೌನ್’!?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಬೇಕು ಎಂಬ ಆಗ್ರಹ ನಾಗರಿಕರಿಂದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂದು ಮಹತ್ವದ ಸಭೆ ನಡೆಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ಈಗಾಗಲೇ ನಡೆದಿದ್ದು ಈಗ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯುತ್ತಿದೆ. ಇಂದಿನಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು ಜು.4ರವರೆಗೆ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಜು.5ರ ಬಳಿಕ ಲಾಕ್ ಡೌನ್ ಜಾರಿ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ಲಾಕ್ ಡೌನ್ ಮತ್ತೆ ಬೇಕೋ ಬೇಡವೋ ಎಂಬ ಬಗ್ಗೆ ಜನರೇ ನಿರ್ಧಾರ ಕೈಗೊಳ್ಳಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು ಜನರ ದೈನಂದಿನ ಚಟುವಟಿಕೆಗಳ ಮೇಲೆ ಇದು ನಿರ್ಧಾರವಾಗಿರುತ್ತೆ ಎಂದಿದ್ದಾರೆ. ಇನ್ನು ಲಾಕ್ ಡೌನ್ ಕುರಿತು ಇನ್ನೊಂದು ಸುತ್ತಿನ ಸಭೆ ನಾಳೆ ನಡೆಯಲಿದ್ದು ಅದರಲ್ಲಿ ಆದೇಶ ಹೊರಡಿಸುವ ಎಲ್ಲಾ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *