ಡಿಕೆಶಿ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಅನುಮತಿ ನೀಡದೆ ಸರಳವಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದ ನೂತನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಜೂ.14ರಂದು ಕಾರ್ಯಕ್ರಮ ನಡೆಯುವುದು ಪಕ್ಕಾ ಆಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, “ನಿನ್ನೆ ರಾತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ. ಪದಗ್ರಹಣ ಕಾರ್ಯಕ್ರಮ ಮಾಡಿಕೊಳ್ಳಲು ಅನುಮತಿ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಹೆಚ್ಚು ಜನರು ಸೇರಿದಂತೆ ಹೇಳಿದ್ದೇನೆ. ಅವರು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published. Required fields are marked *