ತನ್ನದೇ ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ದಾರುಣ ಮೃತ್ಯು

ಮಂಗಳೂರು: ತನ್ನದೇ ಟ್ರ್ಯಾಕ್ಟರ್ ನಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ದಾರುಣ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಹಾಕುವಕಲ್ಲು ಪುಣ್ಯಕೋಟಿ ನಗರದ ಬಳಿ ನಡೆದಿದೆ.
ಮೃತ ಬೈಕ್ ಸವಾರ ಗದಗ ಮೂಲದವನಾಗಿದ್ದು ಆತನದ್ದೇ ಟ್ರ್ಯಾಕ್ಟರ್ ನಲ್ಲಿ ದುಡಿಯುತ್ತಿದ್ದ ಎನ್ನಲಾಗಿದೆ. ಇಂದು ಕೆಲಸಕ್ಕೆ ರಜೆ ಮಾಡಿದ್ದು ಬದಲಿ ಚಾಲಕನನ್ನು ಕರೆಸಿಕೊಂಡಿದ್ದ ಎನ್ನಲಾಗಿದೆ. ಪುಣ್ಯಕೋಟಿ ನಗರದಲ್ಲಿನ ಮನೆಯೊಂದರ ಬಳಿ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು ಮಂಜನಾಡಿ ಸಂಪರ್ಕ ರಸ್ತೆಗೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಂತೆಯೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ತಾಗಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಬೈಕ್ ಸವಾರನ ತಲೆಯ ಮೇಲೆ ಚಲಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *