ದೆಹಲಿ ಸಿಎಂ ಕೇಜ್ರಿವಾಲ್‍ಗೆ ನಾಳೆ ಕೋವಿಡ್ ಟೆಸ್ಟ್!

ನವದೆಹಲಿ: ದೆಹಲಿ ಸಿಎಂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ವೈದ್ಯರ ಸಲಹೆ ಮೇರೆಗೆ ನಾಳೆ ಕೊವಿಡ್ 19 ಪರೀಕ್ಷೆ ನಡೆಸಲಾಗುತ್ತದೆ ಎಂದು ದೆಹಲಿ ಸರ್ಕಾರದ ವಕ್ತಾರರು ಹೇಳಿದ್ದಾರೆ. ನಿನ್ನೆ ಎಂಜೆ ಕೇಜ್ರಿವಾಲ್ ಅವರಿಗೆ ಗಂಟಲಿನಲ್ಲಿ ಕೆರೆತ, ಜ್ವರ ಕಾಣಿಸಿಕೊಂಡಿದೆ. ಇದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೇಜ್ರಿವಾಲ್ ಅವರನ್ನು ಐಸೋಲೇಷನ್ ವಾರ್ಡ್‍ನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಉಸಿರಾಟದ ತೊಂದರೆ, ಕೆಮ್ಮು, ಗಂಟಲು ನೋವಿಗಾಗಿ ಕೇಜ್ರಿವಾಲ್ ಈ ಹಿಂದೆ ಪ್ರಕೃತಿ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಂಡಿದ್ದರು.
ವೈದ್ಯರ ಸಲಹೆ ಮೇರೆಗೆ ಮಂಗಳವಾರ ಬೆಳಗ್ಗೆ ಕೊವಿಡ್ 19 ಸಂಬಂಧಿಸಿದ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಸದ್ಯಕ್ಕೆ ಅವರು ಮನೆಯಲ್ಲೇ ಉಳಿದುಕೊಂಡಿದ್ದಾರೆ. ಕೊವಿಡ್ 19 ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಪ್ರಕಟಿಸಲಾಗುತ್ತದೆ. ಕೇಜ್ರಿವಾಲ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ದೆಹಲಿಯಲ್ಲಿ ಸುಮಾರು 28,936 ಕೊವಿಡ್ 19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಈವರೆಗೆ 812 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *