ದ.ಕ.-ಉಡುಪಿ ಎಡೆಬಿಡದೆ ಸುರಿಯುತ್ತಿರುವ ಮಳೆ, ನೆರೆ ಭೀತಿ!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ಸಂಜೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ನೆರೆ ಭೀತಿ ಎದುರಾಗಿದೆ.
ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದ್ರೆ ತಾಲೂಕಿನಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನದಿಯಲ್ಲೂ ನೀರಿನ ಹರಿವು ಹೆಚ್ಚಿದ್ದು ನದಿಪಾತ್ರದ ಮನೆಗಳಿಗೆ ಅಪಾಯದ ಭೀತಿ ಎದುರಾಗಿದೆ. ಉಡುಪಿ, ಹೆಬ್ರಿ ಆಗುಂಬೆ, ಚಿಕ್ಕಮಗಳೂರು, ಶೃಂಗೇರಿ ಭಾಗದಲ್ಲೂ ಮಳೆಯಾಗುತ್ತಿದ್ದು ವಿಪರೀತ ಸೆಖೆಯಿಂದ ಕಂಗೆಟ್ಟಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.