ದ.ಕ.-23, ಉಡುಪಿ-0, ರಾಜ್ಯದಲ್ಲಿ ಒಟ್ಟು 161 ಮಂದಿಗೆ ಕೊರೊನಾ!

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 161 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಯಾದಗಿರಿ ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ 61 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 642ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 29 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 522ಕ್ಕೆ ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 23 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 210ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿರುವ ಕಲಬುರಗಿ ಜಿಲ್ಲೆಯಲ್ಲಿಂದು 10 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 769ಕ್ಕೆ ಏರಿದೆ. ಬೀದರ್ 9, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ 2, ಚಿಕ್ಕಬಳ್ಳಾಪುರ 2, ಮೈಸೂರು 2, ಧಾರವಾಡ 2 ಮತ್ತು ಬಾಗಲಕೋಟೆ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2605 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

Leave a Reply

Your email address will not be published. Required fields are marked *