ದ.ಕ.-4, ಉಡುಪಿ ಜಿಲ್ಲೆಯಲ್ಲಿ 0 ಕೊರೊನಾ ಸೋಂಕು!

ಮಂಗಳೂರು: ನಿನ್ನೆ ಸಂಜೆ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದರೆ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರಿಗೆ ಮಹಾರಾಷ್ಟ್ರ ಲಿಂಕ್ ಇದ್ದು, ಅವರನ್ನು ಕ್ವಾರಂಟೈನ್ ಕೇಂದ್ರದಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.