ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
ಮಂಗಳೂರು: ನಗರದ ಹೊರವಲಯದ ಜೆಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಸ್ಥಳದಲ್ಲಿ ಜನರು ಸೇರಿದ್ದಾರೆ.
ನದಿಗೆ ಹಾರಿದವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸಂಜೆ 4:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಧಾವಿಸಿದ್ದಾರೆ. ಕಳೆದ ವಾರ ಇಲ್ಲಿ ಮುಡಿಪು ನಿವಾಸಿ ಯುವಕನೊಬ್ಬ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದ ಕಥೆ ಕಟ್ಟಿದ್ದ. ಬಳಿಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದ ಘಟನೆ ನಡೆದಿತ್ತು. ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು ಈ ಹಿಂದೆ `ಕೆಫೆ ಕಾಫಿ ಡೇ’ ಮಾಲಕ ಸಿದ್ದಾರ್ಥ್ ಕೂಡಾ ಇಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸ್ಮರಿಸಬಹುದಾಗಿದೆ.