ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ!?
ಬೆಂಗಳೂರು: ನಿನ್ನೆ ತಾನೇ ನಡೆದಿದ್ದ ದ್ವಿ.ಪಿಯು ಇಂಗ್ಲಿಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಆಕೆಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಯನಗರ ನಾಲ್ಕನೇ ಬ್ಲಾಕ್ ನಲ್ಲಿರುವ ಎಕ್ಸಾಂ ಸೆಂಟರ್ ನಲ್ಲಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಈಕೆಯ ಕೈಗೆ ಸೀಲ್ ಹಾಕಿದ್ದು ಹೋಂ ಕ್ವಾರಂಟೈನ್ ನಲ್ಲಿದ್ದಳು ಎಂದು ತಿಳಿದುಬಂದಿದೆ. ಆದರೆ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿದ್ದು ಈಗ ಆಕೆಯ ಕೋವಿಡ್ ರಿಪೋರ್ಟ್ ಪಾಸಿಟಿವ್ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಎಕ್ಸಾಂ ಸೆಂಟರ್ ನಲ್ಲಿದ್ದ ಇತರ ವಿದ್ಯಾರ್ಥಿನಿಯರು, ಶಿಕ್ಷಕರು, ಪರೀಕ್ಷೆ ಮೇಲ್ವಿಚಾರಕರು, ಅವರ ಮನೆಮಂದಿ ಎಲ್ಲರಲ್ಲೂ ಆತಂಕ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.