ಪುತ್ತೂರು: ಡೆಂಗ್ಯೂಗೆ 2ನೇ ಬಲಿ! ಪರ್ಪುಂಜದ ಮಹಿಳೆ ಮೃತ್ಯು!
ಮಂಗಳೂರು: ಮಾರಕ ಡೆಂಗ್ಯೂ ಜ್ವರಕ್ಕೆ ಮಹಿಳೆಯೋರ್ವರು ಬಲಿಯಾದ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಎಂಬಲ್ಲಿ ನಡೆದಿದೆ. ವಾರದ ಹಿಂದಷ್ಟೇ ಬೆಟ್ಟಂಪಾಡಿಯಲ್ಲಿ ಮಹಿಳೆ ಮೃತಪಟ್ಟಿದ್ದರು. ಡೆಂಗ್ಯೂ ಜ್ವರ ಪೀಡಿತರಾಗಿದ್ದ ಮಹಿಳೆ ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರನ್ನು ನಝೀರ್ ಮಾಸ್ಟರ್ ಎಂಬವರ ಪತ್ನಿ ನಸೀಮಾ(32) ಎಂದು ಹೆಸರಿಸಲಾಗಿದೆ.
ನಸೀಮಾ ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ.