ಪ್ರಧಾನಿ ವಿರುದ್ಧ ವಿವಾದಾತ್ಮಕ ಟ್ವೀಟ್: ಸಿಎಸ್‍ಕೆ ವೈದ್ಯ ಅಮಾನತು

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನಾಗರಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯ ಮಧು ತೊಟ್ಟಪ್ಟಿಲಿಲ್ ಅವರನ್ನು ಅಮಾನತು ಮಾಡಲಾಗಿದೆ.
ಶವಪೆಟ್ಟಿಗೆಯಲ್ಲಿ ಪ್ರಧಾನಿ ಕೇರ್ಸ್ ಸ್ಟಿಕ್ಕರ್‍ಗಳು ಇವೆಯೇ ಎಂದು ತಿಳಿಯಲು ನನಗೆ ಕುತೂಹಲವಿದೆ'' ಎಂದು ಡಾ.ಮಧು ತೊಟ್ಟಪ್ಪಿಲಿಲ್ ಬರೆದುಕೊಂಡಿದ್ದಾರೆ. ಈ ಹಿನ್ನೆಲೆ ಸಿಎಸ್‍ಕೆ ತಕ್ಷಣಕ್ಕೆ ಜಾರಿಗೆ ಬರುವಂತೆ ತಂಡದಿಂದ ಅವರನ್ನು ಅಮಾನತುಗೊಳಿಸಿದೆ. ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಕುರಿತು ಐಪಿಎಲ್ ಫ್ರ್ಯಾಂಚೈಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ)ಯ ಡಾ.ಮಧು ತೊಟ್ಟಪ್ಪಿಲಿಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಒಂದು ಕಡೆ ದೇಶವೇ ಪಕ್ಷಬೇಧ ಮರೆತು ಒಟ್ಟಾಗಿ ಯೋಧರು ಹಾಗೂ ಭಾರತದ ಪ್ರಧಾನಿ ಜೊತೆಗಿದ್ದರೆ ಇತ್ತ ಮಧು ಚೀನಾಗೆ ಬೆಂಬಲ ನೀಡುವಂತೆ ಟ್ವೀಟ್ ಮಾಡಿದ್ದಾರೆ ಎಂದು ಹೆಚ್ಚಿನ ಸಿಎಸ್‍ಕೆ ಅಭಿಮಾನಿಗಳು ಮಧು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಸ್‍ಕೆ ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್,ಡಾ.ಮಧು ಅವರ ವೈಯಕ್ತಿಕ ಟ್ವೀಟ್ ವಿಚಾರ ನಮಗೆ ತಿಳಿದಿರಲಿಲ್ಲ. ಅವರನ್ನು ತಂಡದ ವೈದ್ಯರ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಮ್ಯಾನೇಜ್ಮೆಂಟ್‍ಗೆ ಹೇಳದೆ ಅವರು ಮಾಡಿದ ಟ್ವೀಟ್‍ಗೆ ಸಿಎಸ್‍ಕೆ ವಿಷಾದಿಸುತ್ತದೆ” ಎಂದು ತಿಳಿಸಿದೆ.

Leave a Reply

Your email address will not be published. Required fields are marked *