ಬಳ್ಳಾರಿಯಲ್ಲಿ ಮಾಜಿ ಸಚಿವ ಪುತ್ರನ ಮದುವೆಯಲ್ಲಿ ಜನಸಾಗರ!

ಬಳ್ಳಾರಿ: ಮಾಜಿ ಸಚಿವ, ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ ಅವರ ಮಗನ ಮದುವೆಯಲ್ಲಿ ಇಂದು ಜನಸಾಗರವೇ ನೆರೆದಿದ್ದು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದ್ದ ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಸೇರಿದಂತೆ ಎಲ್ಲಾ ನಿಯಮಗಳು ಸಂಪೂರ್ಣ ಉಲ್ಲಂಘನೆಯಾಗಿವೆ. ಪರಮೇಶ್ವರ್ ನಾಯ್ಕ ಅವರ ಮಗ ಅವಿನಾಶ್ ಅವರ ಮದುವೆ ಸಮಾರಂಭ ಬಳ್ಳಾರಿ ಜಿಲ್ಲೆ ಲಕ್ಷ್ಮೀಪುರದಲ್ಲಿ ಇಂದು ನಡೆಯುತ್ತಿದೆ. ಮದುವೆಗೆ ಗಣ್ಯರ ದಂಡೇ ಆಗಮಿಸಿದೆ. ಮದುವೆ ವೇದಿಕೆಯು ಜನರಿಂದ ತುಂಬಿದೆ. ಮದುವೆಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜಿ ಪರಮೇಶ್ವರ್ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದು ಹೆಲಿಕಾಪ್ಟರ್ ನೋಡಲು ಜನ ರಾಶಿಬಿದ್ದ ಘಟನೆಯೂ ನಡೆದಿದೆ.
ಈ ಕುರಿತು ಸ್ಪಷ್ಟೀಕರಣ ನೀಡಿರುವ ಪಿ.ಟಿ. ಪರಮೇಶ್ವರ್ ನಾಯ್ಕ್, `ಮಗನ ಮದುವೆಗೆ ಕಡಿಮೆ ಜನ ಬನ್ನಿ ಎಂದು ಮನವಿ ಮಾಡಿದ್ದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಮನವಿ ಮಾಡಿಕೊಂಡಿದ್ದೆ. ಆದರೆ ನನ್ನ ಮೇಲಿನ ಪ್ರೀತಿಯಿಂದ ಜನರು ಜಾಸ್ತಿ ಬಂದಿದ್ದಾರೆ. ಜನರು ಬರುವುದನ್ನು ತಡೆಯಲು ಸಾಧ್ಯವಾಗುತ್ತಾ?’ ಎಂದಿದ್ದಾರೆ. ಎಲ್ಲರಿಗೂ ಮಾಸ್ಕ್, ಸ್ಯಾನಿಟೈಜರ್, ಥರ್ಮಲ್ ಸ್ಕಾನಿಂಗ್ ಮಾಡಲು ಹೇಳಿದ್ದೆ. ಆದರೆ ಜನ ಹೆಚ್ಚಾದ ಹಿನ್ನೆಲೆಯಲ್ಲಿ ಏನೂ ಮಾಡಲಾಗಲಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *