ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತವರ ತಾಯಿಗೆ ಕೊರೊನಾ ಪಾಸಿಟಿವ್!

ನವದೆಹಲಿ: ಬಿಜೆಪಿ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತವರ ತಾಯಿ ಮಾಧವಿ ರಾಜೇ ಅವರು ಜ್ವರ ಮತ್ತು ಗಂಟಲುನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೋವಿಡ್-19 ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಉತ್ತರ ದೆಹಲಿಯ ಮ್ಯಾಕ್ಸ್ ಸಾಕೇತ್ ಆಸ್ಪತ್ರೆ ಮೂಲಗಳು ಹೇಳಿವೆ.
ಬಿಜೆಪಿ ನಾಯಕರೊಬ್ಬರು ಸಾಕೇತ್ ಆಸ್ಪತ್ರೆಗೆ ಕೋವಿಡ್ ಸೋಂಕಿನಿಂದಾಗಿ ದಾಖಲಾಗಿದ್ದರು. ಇದಾದ ನಾಲ್ಕು ದಿನಗಳ ಬಳಿಕ ಜ್ಯೋತಿರಾದಿತ್ಯ ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲೂ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು ಅವರನ್ನು ಐಸೋಲೇಷನ್ ವಾರ್ಡ್‍ನಲ್ಲಿ ದಾಖಲಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದರ ರಿಪೋರ್ಟ್ ಇಂದು ಸಂಜೆ ಬರುವ ನಿರೀಕ್ಷೆಯಿದೆ.