ಭಾರತೀಯ ಸೇನೆ ಮೇಲೆ ಚೀನಾ ಫೈರಿಂಗ್: ಓರ್ವ ಅಧಿಕಾರಿ, ಇಬ್ಬರು ಯೋಧರ ಹುತಾತ್ಮ! ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ!!

ಲಡಾಖ್: ಗಡಿ ಭಾಗದಲ್ಲಿ ಭಾರತದ ಸೇನೆ ವಿರುದ್ಧ ಚೀನಾಗುಂಡಿನ ದಾಳಿ ನಡೆಸಿದ್ದು ಈ ವೇಳೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಗಾಲ್ವನ್ ಕಣಿವೆ ಭಾಗದಲ್ಲಿ ನಿನ್ನೆ ರಾತ್ರಿ ಚೀನಾ ಹಾಗೂ ಭಾರತೀಯ ಸೇನೆ ಮುಖಾಮುಖಿ ದಾಳಿಯಾಗಿದ್ದು ಸೇನೆಯ ಹಿರಿಯ ಅಧಿಕಾರಿ ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಲಡಾಖ್ನ ಪ್ಯಾಂಗೋಂಗ್ ಟ್ಸೋ ಸರೋವರದ ಬಳಿ ಇರುವ ಎಲ್ಎಸಿ ಗಡಿಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ಚೀನಾ ಸೈನಿಕರು ಆಕ್ರಮಣಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರೂ ಕೂಡ ಪ್ರತಿರೋಧ ತೋರುತ್ತಿದ್ದಾರೆ. ಗಾಲ್ವನ್ ಕಣಿವೆಯಲ್ಲಿ ಡರ್ಬುಕ್-ಶಯೋಕ್-ದೌಲತ್ ಬೇಗ್ ಓಲ್ಡೀ ರಸ್ತೆಯನ್ನು ಸಂಪರ್ಕಿಸುವ ಮತ್ತೊಂದು ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಇದು ಚೀನೀಯರ ಕೆಂಗಣ್ಣಿಗೆ ಕಾರಣವಾಗಿದೆ. ಚೀನಾ 2,500 ಸೇನಾ ತುಕಡಿಗಳನ್ನ ನಿಯೋಜಿಸಿದೆ. ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನ ಗಡಿಭಾಗದಲ್ಲಿ ಶೇಖರಿಸುತ್ತಿದೆ.

Leave a Reply

Your email address will not be published. Required fields are marked *