ಭೀಕರ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರ ಗಂಭೀರ
ಬಂಟ್ವಾಳ: ಬಿ.ಸಿ.ರೋಡು ಮುಖ್ಯ ವೃತ್ತದ ಬಳಿ ಕೈನೆಟಿಕ್ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಸುಮಾರು 8 ಗಂಟೆಗೆ ನಡೆದಿದೆ.
ಗಾಯಾಳುವನ್ನು ಬಂಟ್ವಾಳ ಕಾಮಾಜೆ ರಿಕ್ಷಾ ಚಾಲಕ ಶಿವಪ್ಪ ಪೂಜಾರಿ ಎಂಬವರ ಪುತ್ರ ರಿತೇಶ್ ಎಂದು ಗುರುತಿಸಲಾಗಿದೆ.
ಗಾಯಾಳುವಿನ ತಲೆಗೆ ಗಂಭೀರ ಗಾಯಗೊಂಡಿದ್ದು, ರಕ್ತದ ಮಡುವಿನಲ್ಲಿ ರಸ್ತೆ ಬದಿ ಬಿದ್ದಿದ್ದ ಅವರನ್ನು ಸ್ಥಳೀಯರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೇಬಲ್ ನೆಟ್ವರ್ಕ್ ಸಿಬ್ಬಂದಿಯಾಗಿರುವ ರಿತೇಶ್ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.