ಮಂಗಳೂರು ಬಂದರು ಬಂದ್!

ಮಂಗಳೂರು: ನಗರದ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮೀನುಗಾರರೇ ಸೇರಿಕೊಂಡು ದಕ್ಕೆಯನ್ನು ಬಂದ್ ಮಾಡಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆ, ರಾಜ್ಯಗಳಿಗೆ ದಕ್ಕೆಯಿಂದ ಮೀನು ಸಾಗಾಟವಾಗುತ್ತಿತ್ತು. ಗೋವಾ, ಕೇರಳ ರಾಜ್ಯದಿಂದಲೂ ಮೀನಿನ ವಾಹನಗಳು ದಕ್ಕೆಗೆ ಬಂದು ವ್ಯಾಪಾರ ವಹಿವಾಟು ನಡೆಸುತ್ತಿದ್ದವು. ಕನಿಷ್ಟ ಸಾಮಾಜಿಕ ಅಂತರವೂ ಇಲ್ಲದೆ ಬಂದರಿನಲ್ಲಿ ಮೀನು ವ್ಯಾಪಾರ ನಡೆಯುತ್ತಿತ್ತು. ಈಗ ಇಲ್ಲಿ ದುಡಿಯುತ್ತಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಜನರಿಗೆ ಸೋಂಕು ಹರಡುವ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರೇ ಬಂದರನ್ನು ಬಂದ್ ಮಾಡಿದ್ದಾರೆ.

Leave a Reply

Your email address will not be published. Required fields are marked *