ಮಾಜಿ ಸಚಿವ ರೇವಣ್ಣಗೆ ಕೊರೊನಾ ಭೀತಿ! ಬೆಂಗಾವಲು ಪಡೆಯ ಮೂವರಿಗೆ ಸೋಂಕು!!

ಹಾಸನ: ಮಾಜಿ ಸಚಿವ ಹೆಚ್. ಡಿ. ರೇವಣ್ಣಗೆ ಕೊರೊನಾ ಭೀತಿ ಎದುರಾಗಿದೆ. ಅವರ ಗಂಟಲ ದ್ರವ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈಗಾಗಲೇ ರೇವಣ್ಣ ಅವರ ಬೆಂಗಾವಲು ಪಡೆಯ ನಾಲ್ವರು ಸಿಬ್ಬಂದಿಗೆ ಸೋಂಕು ತಗಲಿದೆ. ಬೆಂಗಳೂರು ಮೂಲದ ಮೂವರು ಮತ್ತು ಹಾಸನದ ಒಬ್ಬರಿಗೆ ಸೋಂಕು ತಗುಲಿದ್ದು ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್.ಡಿ. ರೇವಣ್ಣ ಬೆಂಗಳೂರಿನ ನಿವಾಸದಲ್ಲಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅವರಿಗೆ ಗಂಟಲ ದ್ರವ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಪೊಲೀಸರಪರೀಕ್ಷೆ ನಡೆಸಿದ ವೇಳೆ ನಾಲ್ವರಿಗೆ ಸೋಂಕು ತಗಲಿರುವುದು ಖಚಿತವಾಗಿದೆ. ಹೆಚ್.ಡಿ. ರೇವಣ್ಣ ಅವರ ಇಬ್ಬರು ಆಪ್ತ ಸಹಾಯಕರಿಗೆ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ಮಾಡಲಾಗಿದ್ದು ನೆಗೆಟಿವ್ ವರದಿ ಬಂದಿದೆ. ಹಾಸನದಲ್ಲಿ ನಿನ್ನೆ 22 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 381ಕ್ಕೆ ಏರಿಕೆಯಾಗಿದೆ.
Are these security provided by state government. Why does this ex minister be provided security at tax payers expenses. He and his family are known for their rowdisam.