ಮೂಲ್ಕಿ: ಯುವಕನ ಬರ್ಬರ ಹತ್ಯೆ, ಇಬ್ಬರು ಗಂಭೀರ

ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಲ್ಕಿ ಹೆಚ್ ಡಿ ಎಫ್ ಸಿ ಬ್ಯಾಂಕ್ ಮುಂಭಾಗ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಸಂಜೆ ನಡೆದಿದೆ. ಜೊತೆಯಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಾರ್ನಾಡ್ ದರ್ಗಾ ರೋಡ್ ನಿವಾಸಿ ಮುನೀರ್ ಮತ್ತವನ ಅಳಿಯನ ಮೇಲೆ ಬ್ಯಾಂಕ್ ಮುಂಭಾಗ ದಾಳಿ ನಡೆದಿದೆ. ಬೆನ್ನಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುನೀರ್ ನ ಅಳಿಯ ಮೂಡಬಿದ್ರೆ ಅಲ್ ಐನ್ ಗೋಲ್ಡ್ ಮಾಲಕ ಲತೀಫ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮುನೀರ್ ಹಾಗೂ ಆತನ ಪುತ್ರ ಇಯಾಜ್ ಗಂಭೀರ ಗಾಯಗೊಂಡಿದ್ದಾರೆ.
ಮುನೀರ್ ಕೆಲವು ತಿಂಗಳ ಹಿಂದೆ ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹತ್ತಾರು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ. ಐಷಾರಾಮಿ ಕಾರುಗಳ ಸಮೇತ ಆತನನ್ನು ಬಂಧಿಸಲಾಗಿತ್ತು. ಹಣಕಾಸಿನ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ವೈಮನಸ್ಸಿನಿಂದ ಕೃತ್ಯ ನಡೆದಿರಬೇಕೆಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *