ರಾಜ್ಯದಲ್ಲಿ ಮತ್ತೆ ಲಾಕ್ ಡೌನ್!? ನಾಳೆ ಸರಕಾರದಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಎಲ್ಲ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಅದರಲ್ಲಿ ಸರಕಾರ ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಯಡಿಯೂರಪ್ಪ ಸಂಪುಟದ ಹಲವು ಸಚಿವರು ಲಾಕ್ ಡೌನ್ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಆಚರಿಸಲಾಗುತ್ತಿದೆ. ಬೆಂಗಳೂರಿನ 4 ಕಡೆ ಲಾಕ್ ಡೌನ್ ಹಾಗೂ 5 ಕಡೆಗಳಲ್ಲಿ ಸೀಲ್ ಡೌನ್ ಆದೇಶವನ್ನು ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ಏರಿಕೆಯನ್ನು ಕಾಣುತ್ತಿದ್ದು ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

Leave a Reply

Your email address will not be published. Required fields are marked *