ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐಎಂ ಧರಣಿ

ಮಂಗಳೂರು: ಕೊರೊನಾ ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದ್ದು ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ಧರಣಿ ನಡೆಸಿತು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್, ಜೆ. ಬಾಲಕೃಷ್ಣ ಶೆಟ್ಟಿ ಹಾಗೂ ಮುಖಂಡರಾದ ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಜಯಂತಿ ಬಿ. ಶೆಟ್ಟಿ, ಭಾರತಿ ಬೋಳಾರ, ಸುರೇಶ್ ಬಜಾಲ್, ಬಾಬು ದೇವಾಡಿಗ, ನವೀನ್ ಕೊಂಚಾಡಿ ಮುಂತಾದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *