ವೈದ್ಯಕೀಯ ಸಚಿವರ ಪತ್ನಿ-ಮಗಳು, ತಂದೆಗೂ ಕೊರೊನಾ ಪಾಸಿಟಿವ್!
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಚಿವರ ವರದಿಯಲ್ಲಿ ನೆಗೆಟಿವ್ ಬಂದಿದೆ. ನಿನ್ನೆ ಮನೆ ಅಡುಗೆ ಕೆಲಸದಾಳು ಹಾಗೂ ತಂದೆಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.
ಮೊನ್ನೆ ಅವರ ಮನೆಯ ಅಡುಗೆ ಕೆಲಸ ಮಾಡುತ್ತಿದ್ದಾತನಲ್ಲಿ ಸೋಂಕು ದೃಢಪಟ್ಟಿದ್ದು ಬಳಿಕ ತಂದೆಯಲ್ಲಿ ಸೋಂಕಿನ ಲಕ್ಷಣಗಳು ಗೋಚರಿಸಿತ್ತು. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರ ಇಡೀ ಕುಟುಂಬ ಕೊರೊನಾ ತಪಾಸಣೆಗೆ ಒಳಪಟ್ಟಿತ್ತು.
ಸಚಿವ ಸುಧಾಕರ್ ಹಾಗೂ ಇಬ್ಬರು ಗಂಡು ಮಕ್ಕಳ ಕೊರೊನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದೆ. ಈ ಕುರಿತು ಸಚಿವರೇ ಸ್ವತಃ ಟ್ವೀಟ್ ಮಾಡಿದ್ದಾರೆ.