ಸರ್ಕಾರದ ಟೆಂಡರ್ಗಳಿಂದ ಚೀನಾ ಕಂಪೆನಿಗಳನ್ನು ಹೊರಗಿಡಿ: ಎಸ್ಜೆಎಂ

ನವದೆಹಲಿ: ಸರ್ಕಾರಗಳ ಟೆಂಡರ್ ಗಳಲ್ಲಿ ಭಾಗವಹಿಸಿರುವ ಚೀನಾದ ಎಲ್ಲ ಕಂಪೆನಿಗಳಿಗೆ ನಿಷೇಧ ಹೇರಬೇಕು. ಅಲ್ಲದೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಜನರಿಗೆ ಪ್ರೋತ್ಸಾಹ ನೀಡಬೇಕು ಎಂದು ಆರೆಸ್ಎಸ್ ಸಂಯೋಜಿತ ಸ್ವದೇಶಿ ಜಾಗರಣ್ ಮಂಚ್(ಎಸ್ಜೆಎಂ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಭಾರತ-ಚೀನಾ ಗಡಿಯಲ್ಲಿ ಭಾರೀಯ ಯೋಧರ ಮೇಲೆ ಚೀನಾ ನಡೆಸಿದ ದಾಳಿಗೆ ಪ್ರತಿಯಾಗಿ ಆರ್ಎಸ್ಎಸ್ನ ಎಸ್ಜೆಎಂ ಈ ಹೇಳಿಕೆ ನೀಡಿದೆ.
ಚೀನಾ ಉಪಟಳ ಹೆಚ್ಚುತ್ತಿದ್ದು, ಜೂನ್ 15 ಹಾಗೂ 16ರಂದು ಪೂರ್ವ ಲಡಾಕ್ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆ ಹಾಗೂ ಚೀನಾ ಮಧ್ಯೆ ನಡೆದ ದಾಳಿ, ಪ್ರತಿ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇವರಿಗೆ ಗೌರವ ಸಲ್ಲಿಸಬೇಕಾದರೆ ದೇಶದಲ್ಲಿ ಚೀನಾ ಕಂಪನಿ ಹಾಗೂ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಸ್ವದೇಶಿ ಜಾಗರಣ್ ಮಂಚ್ನ ಅಶ್ವಿನಿ ಮಹಾಜನ್ ಆಗ್ರಹಿಸಿದ್ದಾರೆ. ಅಲ್ಲದೆ ನಟ, ನಟಿಯರು ಹಾಗೂ ಕ್ರಿಕೆಟ್ ಆಟಗಾರರು ಸಹ ಚೀನಾ ಉತ್ಪನ್ನಗಳನ್ನು ಪ್ರೋತ್ಸಾಹಿಸದಂತೆ ತಿಳಿಸಿದ್ದಾರೆ. ಸೋಮವಾರ ರಾತ್ರಿ ನಡೆದ ಗುಂಡಿನ ಚಕಮಕಿ ವೇಳೆ 20 ಯೋಧರು ಹುತಾತ್ಮರಾಗಿದ್ದಾರೆ. ಕಳೆದ ಐದು ದಶಕಗಳಲ್ಲಿ ನಡೆದ ಅತಿ ದೊಡ್ಡ ಸೇನಾ ಕಾರ್ಯಾಚರಣೆ ಇದಾಗಿದೆ. ಚೀನಾ ಸೈನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದು, ಇದನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ. ಪೂರ್ವ ಲಡಾಕ್ನ ಗಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿದೆ.