ಸಿಎಂ ಗೃಹ ಕಚೇರಿಗೂ `ಕೊರೊನಾ ಕಂಟಕ’, ನಾಲ್ವರು ಸಿಬ್ಬಂದಿಯಲ್ಲಿ ಸೋಂಕು!

ಬೆಂಗಳೂರು: ನಗರದಲ್ಲಿ ಕೊರೊನಾ ಮಹಾಮಾರಿ ಎಲ್ಲಾ ಕಡೆಗಳಲ್ಲೂ ಹೆಚ್ಚುತ್ತಿದ್ದು ಬಹುತೇಕ ಸ್ಥಳಗಳು ಸೀಲ್ ಡೌನ್ ಆಗಿವೆ. ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ವರು ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಇದರಿಂದ ಕಚೇರಿಗೆ ಭೇಟಿಕೊಡುವ ಜನಸಾಮಾನ್ಯರಲ್ಲೂ ಆತಂಕಕ್ಕೆ ಕಾರಣವಾಗಿದೆ. 3 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಅಗ್ನಿಶಾಮಕ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಕೆಲವು ದಿನಗಳ ಹಿಂದಷ್ಟೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಮಹಿಳಾ ಕಾನ್ ಸ್ಟೇಬಲ್ ಪತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಮತ್ತೆ ಇದೀಗ ನಾಲ್ವರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಪರ್ಕದಲ್ಲಿದವರ ಮಾಹಿತಿಯನ್ನು ಪಡೆಯಲಾಗುತ್ತಿದೆ.

Leave a Reply

Your email address will not be published. Required fields are marked *