ಸೋಮವಾರದಿಂದ ಮಂಗಳೂರು ನಗರ ಪಾಲಿಕೆಗೆ ಪ್ರವೇಶ ನಿರ್ಬಂಧ

ಮಂಗಳೂರು: ಮಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ನಗರ ಪಾಲಿಕೆಗೆ ಸೋಮವಾರದಿಂದ (ಜೂ.29) ಪ್ರವೇಶ ನಿರ್ಬಂಧಿಸಲಾಗಿದೆ.
ಪಾಲಿಕೆಗೆ ಪ್ರತಿದಿನ ನೂರಾರು ಮಂದಿ ಸಾರ್ವಜನಿಕರು ಬಂದು ಹೋಗುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇರುವುದರಿಂದ ಸೋಮವಾರದಿಂದ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.