8,105… ದೇಶದಲ್ಲಿ ಕೊರೊನಾ ಸೋಂಕಿತರ ಸಾವು!!

ಹೊಸದಿಲ್ಲಿ: ದೇಶದಲ್ಲಿ ಕೊರೋನ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 8,105ರ ಗಡಿ ದಾಟಿದೆ. ನಿನ್ನೆ 24 ಗಂಟೆಗಳಲ್ಲಿ ದೇಶದಲ್ಲಿ 359 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ನಿನ್ನೆ 10,911 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕಿತರ ಸಂಖ್ಯೆ 2,87,025ಕ್ಕೇರಿದೆ. ಉತ್ತರ ಪ್ರದೇಶದಲ್ಲಿ ಒಂದೇ ದಿನ 10 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಮುಂಬೈಯಲ್ಲಿ 97 ಮಂದಿ ಸೇರಿದಂತೆ ಒಂದೇ ದಿನ 149 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ನಿನ್ನೆ ಗರಿಷ್ಠ ಪ್ರಕರಣ 3,254 ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 94,041ಕ್ಕೇರಿದೆ. ತೆಲಂಗಾಣದಲ್ಲಿ ನಿನ್ನೆ 191 ಹೊಸ ಪ್ರಕರಣ ವರದಿಯಾಗಿದ್ದು ಸೋಂಕಿತರ ಸಂಖ್ಯೆ ನಾಲ್ಕು ಸಾವಿರದ ಗಡಿ ದಾಟಿದೆ.

Leave a Reply

Your email address will not be published. Required fields are marked *