ಅಂತ್ಯಸಂಸ್ಕಾರದ ವೇಳೆ ಗುಂಡಿನ ದಾಳಿ: ೧೪ ಮಂದಿಗೆ ಗಾಯ

ಚಿಕಾಗೋ: ಅಮೆರಿಕದ ಚಿಕಾಗೋದಲ್ಲಿ ಸ್ಮಶಾನದ ಸಮೀಪದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಜನರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಾಗೋ ಪೊಲೀಸರು ಗುಂಡಿನ ದಾಳಿ ನಡೆದಿರುವುದನ್ನು ಖಚಿತಪಡಿಸಿದ್ದಾರೆ.
ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಕಪ್ಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಮಂಗಳವಾರ ಸಂಜೆ 6.30ರ (ಅಮೆರಿಕಾ ಕಾಲಾಮಾನ) ವೇಳೆಗೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಿಂದಾಗಿ 14 ಜನರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಎಷ್ಟು ಜನರಿದ್ದರು? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 14 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಬಗ್ಗೆ ಮಾಹಿತಿ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ನಡೆದ ಸ್ಥಳದಿಂದ ಪೊಲೀಸರು 60 ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡಿದ್ದ 9 ಜನರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. 63ನೇ ರಸ್ತೆಯಲ್ಲಿಯೂ ಸಹ ಮೂವರು ಗಾಯಾಳುಗಳು ಪತ್ತೆಯಾಗಿದ್ದಾರೆ. ಅಲ್ಲಿಯೂ ಸಹ ಗುಂಡಿನ ದಾಳಿ ನಡೆಸಲಾಗಿದೆ ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ಹೇಳಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಬಂದರವನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ಇದೊಂದು ಪೂರ್ವ ನಿಯೋಜಿತ ಸಂಚು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತಪಟ್ಟವರ ಕುಟುಂಬದ ಮೇಲೆ ಹಳೆಯ ದ್ವೇಷವಿತ್ತೆ ಎಂದು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *