ಇಂದಿನಿಂದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಅರೆಂಜ್ ಅಲರ್ಟ್' ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಜೋರಾಗಿ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರದ ವಿವಿಧ ಬಡಾವಣೆಗಳ ರಾತ್ರಿಯೂ ಹಲವು ಭಾರಿ ಮಳೆಯಾಗಿದ್ದು, ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಇಂದು ಮುಂಜಾನೆಯೂ ಅಲ್ಲಲ್ಲಿ ಮಳೆಯಾಗಿದ್ದು ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ
ಯೆಲ್ಲೊ ಅಲರ್ಟ್’ ಘೋಷಣೆ ಮಾಡಿದೆ.