ಉಡುಪಿ: ಬೆರಳೆಣಿಕೆಯ ಸಿಟಿ-ಸರ್ವಿಸ್ ಬಸ್ ಸೇವೆ ಆರಂಭ

ಮಲ್ಪೆ: ಉಡುಪಿ ಜಿಲ್ಲಾಡಳಿತದ ಆದೇಶದಂತೆ ಕಳೆದೊಂದು ವಾರದಿಂದ ಸ್ಥಗಿತಗೊಂಡಿದ್ದ ಉಡುಪಿ ಸರ್ವಿಸ್ ಹಾಗೂ ಸಿಟಿ ಬಸ್ಗಳು ಇಂದಿನಿಂದ ಮತ್ತೆ ಸಂಚಾರ ಆರಂಭಿಸಿವೆ. ನಿನ್ನೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುವುದನ್ನು ಗಮನಿಸಿ ಕೂಡಲೇ ಬಸ್ ಸಂಚಾರ ಆರಂಭಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಬೆರಳೆಣಿಕೆಯ ಸಿಟಿ ಮತ್ತು ಸರ್ವಿಸ್ ಬಸ್ ಗಳು ಮಾತ್ರ ರಸ್ತೆಗಿಳಿದಿದ್ದು ಕುಂದಾಪುರ, ಹೆಬ್ರಿ, ಕಾರ್ಕಳ ಭಾಗದಲ್ಲೂ ಒಂದೆರಡು ಬಸ್ ಗಳು ಮಾತ್ರ ಸಂಚಾರ ಕೈಗೊಂಡಿವೆ.
ನಿನ್ನೆ ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಇಂದು ಮತ್ತು ನಾಳೆ ಸುಮಾರು 25-30 ಸರ್ವಿಸ್ ಹಾಗೂ ಸಿಟಿಬಸ್ಗಳು ಸಂಚಾರ ಆರಂಭಿಸಲಿವೆ. ಮುಂದೆ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಬಸ್ಗಳನ್ನು ರಸ್ತೆ ಇಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು. ಸಭೆಯಲ್ಲಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಉಡುಪಿಯ ಕೆ.ಎಸ್.ಆರ್.ಟಿ.ಸಿ. ಡಿಪೆÇೀ ವ್ಯವಸ್ಥಾಪಕ ಉದಯ ಕುಮಾರ್ ಶೆಟ್ಟಿ, ಆರ್ಟಿಓ ರಾಮಕೃಷ್ಣ ರೈ ಮತ್ತು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.