ಉಡುಪಿ: ಶಾರ್ಟ್ ಸರ್ಕ್ಯೂಟ್‌ನಿಂದ ಬ್ಯಾಂಕ್ ನಲ್ಲಿ ಅಗ್ನಿ ದುರಂತ, ಕಡತಗಳಿಗೆ ಹಾನಿ

ಉಡುಪಿ: ಇಲ್ಲಿನ ಜಾಮೀಯ ಮಸೀದಿ ಬಳಿಯಿರುವ ಯೂನಿಯನ್ ಬ್ಯಾಂಕ್ ( ಹಿಂದಿನ ಕಾರ್ಪೊರೇಶನ್ ಬ್ಯಾಂಕ್ ಫೌಂಡರ್ ಬ್ಯಾಂಕ್ ) ನಡೆದ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬ್ಯಾಂಕ್ ನ ಹವಾನಿಯಂತ್ರಕದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ಕು ಕಂಪ್ಯೂಟರ್ ಗಳು, ಹಲವು ಕಡತಗಳಿಗೆ ಹಾನಿಯಾಗಿದೆ.

ಉಡುಪಿ ಅಗ್ನಿ ಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ವೃತ್ತ ನಿರೀಕ್ಷಕರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಡೆಯಲಾಗಿದೆ. ಸದ್ಯ ಬ್ಯಾಂಕ್ ನಲ್ಲಿ ಯಥಾಪ್ರಕಾರ ಕೆಲಸ ಕಾರ್ಯಗಳು ನಡೆಯುತ್ತಿದೆ.

Leave a Reply

Your email address will not be published. Required fields are marked *